Breaking News

ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ : 15 ಮಂದಿಯ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದ‌ರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದ‌ರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ಸ್ಥಳೀಯ ಪರಿಚಯಸ್ಥರಾದ ದೀಪಕ್ ಮತ್ತು ಸುಮೀತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Follow us on Social media

About the author