Breaking News

ಅಬ್ದುಲ್ ರಹಿಮಾನ್ ಹತ್ಯೆ: ಆರೋಪಿಗಳು ಅರೆಸ್ಟ್

ಮಂಗಳೂರು: ಮೇ 27 ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಹ*ತ್ಯೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣದಕ್ಕೆ ಸಂಬಂಧಿಸಿ ಪೊಲೀಸರು ಮೇ 29 ರಂದು(ಗುರುವಾರ) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರು ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ ಪೂಜಾರಿ(21),ಬಂಟ್ವಾಳದ ಅಮ್ಮುಂಜೆ ಗ್ರಾಮದ ಪ್ರಥ್ವಿರಾಜ್ ಜೋಗಿ (21) ಮತ್ತು ಅಮ್ಮುಂಜೆ ಗ್ರಾಮದ ಚಿಂತನ್ ಬೆಳ್ಚಡ (19) ಎನ್ನುವವರಾಗಿದ್ದಾರೆ.

ಮೂವರನ್ನು ಬಂಟ್ವಾಳದ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಬಂಧಿಸಿರುವುದಾಗಿ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ತನಿಖೆಗಾಗಿ 5 ಪೊಲೀಸರ ತಂಡಗಳನ್ನು ರಚಿಸಲಾಗಿದ್ದು ತನಿಖೆ ಮುಂದುವರಿದಿದೆ.

Follow us on Social media

About the author