Breaking News

ಪಂಜಾಬ್‌ ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ – 4ನೇ ಬಾರಿಗೆ ಫೈನಲ್‌ಗೆ ಲಗ್ಗೆ

ಚಂಡೀಗಢ: ಐಪಿಎಲ್‌ ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಆರ್‌ಸಿಬಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 14.1 ಓವರ್‌ಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಕೇವಲ 101 ರನ್‌ ಗಳಿಸಿತು. ಆರ್‌ಸಿಬಿ 10 ಓವರ್‌ಗೆ ಗುರಿ ತಲುಪಿ ಗೆದ್ದು ಬೀಗಿತು.

ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಫಿಲ್‌ ಸಾಲ್ಟ್‌ ಸ್ಫೋಟಕ ಅರ್ಧಶತಕದೊಂದಿಗೆ ತಂಡಕ್ಕೆ ಗೆಲುವು ತಂದುಕೊಟ್ಟರು. 27 ಬಾಲ್‌ಗಳಿಗೆ 6 ಫೋರ್‌, 3 ಸಿಕ್ಸರ್‌ನೊಂದಿಗೆ 56 ರನ್‌ (ಔಟಾಗದೇ) ಗಳಿಸಿ ಮಿಂಚಿದರು. ವಿರಾಟ್‌ ಕೊಹ್ಲಿ 12, ಮಯಂಕ್‌ ಅಗರ್ವಾಲ್‌ 19, ರಜತ್‌ ಪಾಟೀದಾರ್‌ 15 ರನ್‌ (ಔಟಾಗದೇ) ಗಳಿಸಿದರು. ಅಂತಿಮವಾಗಿ ಆರ್‌ಸಿಬಿ 10 ಓವರ್‌ಗೆ 2 ವಿಕೆಟ್‌ ನಷ್ಟಕ್ಕೆ 106 ರನ್‌ ಗಳಿಸಿ ಜಯ ಸಾಧಿಸಿತು.

Follow us on Social media

About the author