Breaking News

ಮಂಗಳೂರು: ಉದ್ಯೋಗ ನೆರವಿಗೆ ವೆಬ್ ಪೋರ್ಟಲ್ ಅನಾವರಣ

ಮಂಗಳೂರು : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುವ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಅಧಿಕೃತವಾಗಿ ಉದ್ಯೋಗ ನೆರವಿಗಾಗಿ ವೆಬ್‍ಪೋರ್ಟಲ್‍ನ್ನು ಅನಾವರಣಗೊಳಿಸಲಾಗಿದೆ.

  • ಈ ವೆಬ್ ಪೋರ್ಟಲ್‍ನಲ್ಲಿ ಪ್ರತಿಷ್ಠಿತ ಕಂಪನಿಗಳು ನೋಂದಾಯಿಸಿಕೊಂಡು ಅಭ್ಯರ್ಥಿಗಳ ಬಯೋಡೇಟಾವನ್ನು ಪರಿಶೀಲಿಸಿ ಉದ್ಯೋಗಕ್ಕೆ ಪರಿಗಣಿಸುತ್ತಾರೆ. ಆದ ಕಾರಣ ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ತೇರ್ಗಡೆಯಾದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಕೌಶಲ್ಯ ಹಾಗೂ ಅನುಭವವನ್ನುhttp://skillconnect.kaushalkar.com ನಲ್ಲಿ ನೋಂದಾಯಿಸಿ ಸದುಪಯೋಗ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂಖ್ಯೆ 0824–2453222ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×