ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮಗೆ ಬೇಕೆಂದರೆ ಮಾಸ್ಕ್ ಧರಿಸಿಕೊಂಡು ಪರೀಕ್ಷಾ ಕೊಠಡಿಯೊಳಗೆ ಬರಬಹುದು ಎಂದು ಹೇಳಲಾಗಿದೆ.
ಈಗಾಗಲೇ ರಾಜ್ಯ ಸರ್ಕಾರ ಪೂರ್ವ ಪ್ರಾಥಮಿಕ ಹಂತದಿಂದ 5ನೇ ತರಗತಿಯವರೆಗಿನ ಮಕ್ಕಳಿಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಕೊರೊನಾ ವೈರಸ್ ಸೋಂಕಿನ ಭದ್ರತೆಗಾಗಿ ರಜೆ ಘೋಷಿಸಲಾಗಿದೆ. ನಗರದಲ್ಲಿನ ಅನೇಕ ಶಾಲೆಗಳು ಪರೀಕ್ಷೆಗಳನ್ನು ರದ್ದುಪಡಿಸಿ ಬೇಸಿಗೆ ರಜಾವನ್ನು ಮಕ್ಕಳಿಗೆ ಈಗಲೇ ನೀಡಲು ನಿರ್ಧರಿಸಿವೆ. ಈಗಾಗಲೇ ಮಕ್ಕಳು ಹಿಂದಿನ ಪರೀಕ್ಷೆಗಳಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಮೇಲಿನ ತರಗತಿಗಳಿಗೆ ತೇರ್ಗಡೆ ಮಾಡಲು ಶಾಲಾ ಆಡಳಿತ ಮಂಡಳಿ ಯೋಚಿಸುತ್ತಿವೆ.




 
  
  
  
  
  
 