Breaking News

ಬೆಂಗಳೂರು : ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸುಧಾಮನಗರದಲ್ಲಿ ನಡೆದಿದೆ

ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಕುಟುಂಬದವರ ಜೊತೆ ಸುಧಾಮನಗರದಲ್ಲಿ ವಾಸವಿದ್ದ ವರ್ಷಿಣಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸದ್ಯ ವಿದ್ಯಾರ್ಥಿನಿಯ ಸಾವಿಗೆ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಯುವತಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow us on Social media

About the author