Breaking News

ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ : ಧರ್ಮಸ್ಥಳ ಪೊಲೀಸ್ ಠಾಣೆಯ PSI ವಿರುದ್ಧ ಎಫ್‌ಐಆರ್‌

ಬೆಂಗಳೂರು: ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸ್‌ ಠಾಣೆಯ ಪಿಎಸ್‌ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧ ಇಲ್ಲಿನ ಚಂದ್ರಾಲೇಔಟ್‌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕಿಶೋರ್‌ ಅವರ ಪತ್ನಿ, ನಾಗರಬಾವಿ ಟೀಚರ್ಸ್ ಕಾಲೊನಿಯ ಮಾನಸ ನಗರದ ನಿವಾಸಿ ಆರ್‌.ವರ್ಷಾ ಅವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow us on Social media

About the author