ಮಂಗಳೂರು: ಉಡುಪಿ ದಕ್ಷಿಣಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಎಪ್ರಿಲ್ 1 ರಿಂದ 3ರವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ಏಪ್ರಿಲ್ 1 ರಿಂದ 3ರವರೆಗೆ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು & ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾದ್ಯತೆಯಿದ್ದು, ಉತ್ತರ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾದ್ಯತೆ ಇದೆ.
ದಕ್ಷಿಣ ಒಳನಾಡು & ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಈ ನಡುವೆ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 02 ಮತ್ತು 03 ಏಪ್ರಿಲ್ ರಂದು ಮತ್ತು ದಕ್ಷಿಣ ಒಳನಾಡಿನಲ್ಲಿ 03 ಏಪ್ರಿಲ್ 2025 ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಎಚ್ಚರಿಸಿದೆ.
Follow us on Social media