ಉಡುಪಿ: ಪೊಲೀಸ್ ಸಿಬ್ಬಂದಿಯೊಬ್ಬರು ಸಾರ್ವಜನಿಕವಾಗಿ ವ್ಯಕ್ತಿಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಸಿಬ್ಬಂದಿ ವಿರುದ್ಧ ಪೊಲೀಸರೇ ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶರಣ ಬಸವ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 92(ಒ)ಮತ್ತು (ಆರ್) ರಂತೆ ಪ್ರಕರಣ ದಾಖಲಾಗಿದೆ.
ಮಾ. 27ರಂದು ಶರಣ ಬಸವ ಸಾರ್ವಜನಿಕವಾಗಿ ಸುಮಂತ್ ಜೊತೆ ಅಸಭ್ಯವಾಗಿ ವರ್ತಿಸಿದ್ದರು. ಈ ಬಗ್ಗೆ ಸುಮಂತ್ ಪೊಲೀಸರ ಗಮನಕ್ಕೆ ತಂದಿದ್ದರೂ ದೂರು ದಾಖಲಿಸುವುದು ಬೇಡ ಎಂದು ತಿಳಿಸಿದ್ದರು. ಆದರೆ ಪೊಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ.
Follow us on Social media