Breaking News

ಮಂಗಳೂರು: ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ

ಮಂಗಳೂರು: ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ, ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ.

ಇಂಟರ್ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಅನ್ವರ್ ಮಾಣಿಪ್ಪಾಡಿ ಅವರು ಸದ್ಯ ಮಂಗಳೂರಿನಲ್ಲಿರುವ ನಿವಾಸದಲ್ಲಿ ವಾಸವಾಗಿದ್ದಾರೆ.

Follow us on Social media

About the author