Breaking News

ಲವ್ವರ್ ಬ್ಲ್ಯಾಕ್‌ಮೇಲ್‌ – ಹಸೆಮಣೆ ಏರಬೇಕಿದ್ದ ಶಿಕ್ಷಕಿ ಆತ್ಮಹತ್ಯೆ

ಗದಗ: ಲವ್ವರ್ ಬ್ಲ್ಯಾಕ್‌ಮೇಲ್‌ನಿಂದ ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.

ಸೈರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡವರು.

ಮದುವೆಗೆ ಇನ್ನೂ ಕೇವಲ 8 ದಿನ ಬಾಕಿ ಇರುವಾಗಲೇ ಸೈರಾಬಾನು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಭಾನುವಾರ ಸೈರಾಬಾನು ಪೋಷಕರು ಮದುವೆ ಸಾಮಗ್ರಿಗಳನ್ನು ತರಲು ಪೇಟೆಗೆ ಹೋಗಿದ್ದರು. ಪೋಷಕರು ಮರಳಿ ಬರುವಷ್ಟರಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ 5 ವರ್ಷಗಳಿಂದ ಸೈರಾಬಾನು, ಮೈಲೇರಿ ಎಂಬಾತನನ್ನು ಪ್ರೀತಿ ಮಾಡುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ಲವ್ ಬ್ರೇಕಪ್ ಆಗಿತ್ತು. ಬ್ರೇಕಪ್ ಬಳಿಕ ಪೋಷಕರ ಒತ್ತಾಯದ ಮೇರೆಗೆ ಸೈರಾಬಾನು ಬೇರೆ ಮದುವೆಗೆ ಒಪ್ಪಿಕೊಂಡಿದ್ದರು. ಆದರೆ ಸೈರಾಬಾನು ಮದುವೆ ತಯಾರಿ ನೋಡಿ ಲವರ್ ಮೈಲಾರಿ ಟಾರ್ಚರ್ ಶುರುವಾಗಿತ್ತು. ಬೇರೆ ಮದುವೆ ಆದರೆ ಇಬ್ಬರ ಫೋಟೋ ಹಾಗೂ ವೀಡಿಯೋಗಳನ್ನು ವೈರಲ್ ಮಾಡುತ್ತೇನೆ ಎಂದು ಆತ ಬೆದರಿಕೆ ಹಾಕ್ತಿದ್ದ ಎಂಬ ಆರೋಪವಿದೆ. ಸೈರಾಬಾನು ಮರ್ಯಾದೆಗೆ ಅಂಜಿ ಆತ್ಮಹತ್ಯೆ ಶರಣಾಗಿದ್ದಾರೆ ಎಂಬ ಶಂಕ ವ್ಯಕ್ತವಾಗಿದೆ.

Follow us on Social media

About the author