Breaking News

ಕರಾವಳಿಯಲ್ಲಿ `OP TRIGGER’ ಆಪರೇಷನ್ – ಕಟ್ಟೆಚ್ಚರ

ಕಾರವಾರ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ರಾಜ್ಯದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಹದ್ದಿನ ಕಣ್ಣಿರಿಸಿರುವ ಇಂಡಿಯನ್ ನೇವಿ, ಇಂಡಿಯನ್ ಕೋಸ್ಟ್ ಗಾರ್ಡ್‌ ಹಾಗೂ ಕೋಸ್ಟಲ್ ಪೊಲೀಸರು ಕೂಮಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ʻOP TRIGGERʼ ಹೆಸರಿನಲ್ಲಿ ಆಪರೇಷನ್ ನಡೆಸ್ತಿರುವ ಇಂಡಿಯನ್ ನೇವಿ, ಇಂಡಿಯನ್ ಕೋಸ್ಟ್ ಗಾರ್ಡ್‌ ಹಾಗೂ ಕೋಸ್ಟಲ್ ಪೊಲೀಸರು ಅರಬ್ಬಿ ಸಮುದ್ರ ಭಾಗದಲ್ಲಿ ತಪಾಸಣೆ ನಡೆಸುತಿದ್ದಾರೆ.

ದೇಶದ ಆಂತರಿಕ ಭದ್ರತೆ ಹಿನ್ನಲೆಯಲ್ಲಿ ಸಮುದ್ರದಲ್ಲಿರುವ ಸಾಗುವ ಪ್ರತಿ ಬೋಟುಗಳು ಹಾಗೂ ಬಂದರುಗಳಲ್ಲಿರುವ ಬೋಟುಗಳು, ಕಾರ್ಮಿಕರ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕುತಿದ್ದಾರೆ. ಯಾವುದೇ ಉಗ್ರರು ರಾಜ್ಯದ ಕರಾವಳಿಯ ಮೂಲಕ ದೇಶಕ್ಕೆ ಎಂಟ್ರಿಕೊಡಬಾರದು ಎಂಬ ಉದ್ದೇಶದಿಂದ ತಪಾಸಣೆ ಚುರುಕುಗೊಳಿಸಲಾಗಿದೆ.

ಅತಿ ಸೂಕ್ಷ್ಮ ಪ್ರದೇಶವಾಗಿರುವ ಕಾರವಾರದ ನೌಕಾನೆಲೆ ಹಾಗೂ ಕೈಗಾ ಅಣುವಿದ್ಯುತ್ ಸ್ಥಾವರದ ಸುತ್ತಮುತ್ತಲೂ ಭಿಗಿ ಭದ್ರತೆ ನೀಡಲಾಗಿದೆ. ಜೊತೆಗೆ ತೀರ ಪ್ರದೇಶಗಳಲ್ಲಿ ಡ್ರೋನ್‌ಗಳನ್ನು ಕೂಡ ಬಳಸಿ ಪರಿಶೀಲನೆ‌ ನಡೆಸಲಾಗುತ್ತಿದೆ. ಇನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಪ್ರತಿದಿನ ಕೂಮಿಂಗ್ ಕಾರ್ಯಾಚರಣೆಯನ್ನು ಹೆಚ್ಚಿಸಿದ್ದು ಮೀನುಗಾರರಿಗೆ ಯಾರೇ ಅನುಮಾನಸ್ಪದ ಬೋಟುಗಳು ಅರಬ್ಬಿ ಸಮುದ್ರದಲ್ಲಿ ಕಂಡಲ್ಲಿ ತಕ್ಷಣ ಮಾಹಿತಿ ನೀಡಲು ತಿಳಿಸಲಾಗಿದೆ

Follow us on Social media

About the author