Breaking News

ಮಂಗಳೂರು: ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ! ಮೇ.5ಕ್ಕೆ ಟಾರ್ಗೆಟ್ ಫಿಕ್ಸ್ ಪೋಸ್ಟ್‌ ವೈರಲ್

ಮಂಗಳೂರು: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಚರ್ಚೆಯಲ್ಲಿರುವಾಗಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಲಾದ ಪೋಸ್ಟ್‌ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ಬಗ್ಗೆ ವರದಿಯಾಗಿದೆ.

ಹಿಂದೂ ಕಾರ್ಯಕರ್ತ ಭರತ್ ಕುಮ್ಡೇಲು ಎಂಬವರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮೂಲಕ ಜೀವ ಬೆದರಿಕೆಯನ್ನು ಹಾಕಲಾಗಿದೆ ಎಂದು ತಿಳಿದು ಬಂದಿದೆ.

’ಮೇ 5 ರಂದು ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಬಂದು ಕೊಲೆ ಮಾಡುತ್ತೇವೆʼ ಎಂದು ಜೀವ ಬೆದರಿಕೆವುಳ್ಳ ಬರಹವನ್ನು ಹಾಕಿ ಪೋಸ್ಟ್‌ ಮಾಡಲಾಗಿದ್ದು, ಸುಹಾಸ್ ಶೆಟ್ಟಿ ಫೋಟೋಗೆ ರೈಟ್ ಮಾರ್ಕ್ ಹಾಕಿ ಪೋಸ್ಟ್ ಹಾಕಿದ್ದು, ಅದರ ಬದಿಯಲ್ಲಿ ಭರತ್‌ ಅವರ ಫೋಟೋವನ್ನು ಹಾಕಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆಯ ಪೋಸ್ಟ್‌ ವೈರಲ್‌ ಆಗುತ್ತಿದೆ.

ಭರತ್ ಕುಮ್ಡೇಲು ಎಸ್‌ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆಯ ಆರೋಪಿ.

Follow us on Social media

About the author