ಉಡುಪಿ: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ. ಇದರ ಮಧ್ಯ ಸುಹಾಸ್ ಶೆಟ್ಟಿ ಕೊಲೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರತೀಕಾರದ ಬೆದರಿಕೆಗಳು ಹರಿದಾಡುತ್ತಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಹೋಂ ಗಾರ್ಡ್ ಅವಹೇಳನಕಾರಿ ಕಮೆಂಟ್ ಮಾಡಿದ ಬಗ್ಗೆ ತಿಳಿದು ಬಂದಿದೆ.
ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಕಾಮೆಂಟ್ ಹಾಕಿದ್ದ ಉಡುಪಿಯ ಕಾರ್ಕಳದ ಹೋಂ ಗಾರ್ಡ್ ಸಂಪತ್ ಸಾಲಿಯಾನ್ ಬಂಧನವಾಗಿದೆ.
ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್ ಎನ್ನುವಾತ ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಸಂಪತ್ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಹಾಕಿದ್ದಾನೆ. ಈ ಸಂಬಂಧ ಕಾರ್ಕಳ ಪೊಲೀಸರು ಹೋಂ ಗಾರ್ಡ್ ಸಂಪತ್ನನ್ನು ಬಂಧಿಸಿದ್ದಾರೆ.
Follow us on Social media