ಬೆಳ್ತಂಗಡಿ: ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಹಾಸನ ಜಿಲ್ಲೆಯ ಮಾಲೂರು ತಾಲೂಕಿನ ಅಂಗಡಿಹಳ್ಳಿ ನಿವಾಸಿ ಶಿವರಾಜ್ ಯಾನೆ ಶಿವಕೇರಿ ( 32) ಹಾಗೂ ಮಂಗಳೂರು ಕಣ್ಣೂರು ನಿವಾಸಿ ಸಂತೋಷ್ ( 26) ಎಂಬಾತನನ್ನು ಬಂಧಿಸಲಾಗಿದೆ.
ಬೆಳ್ತಂಗಡಿ ತಾಲೂಕು, ಮಾಲಾಡಿ ಗ್ರಾಮದ ಕೊಲ್ಪೆದಬೈಲು ವಸಂತಿ ಹೆಗ್ಡೆ ಎಂಬವರ ಮನೆಯಲ್ಲಿ ಎ. 20 ರಂದು ಕಳ್ಳರು ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿ ಕೋಣೆಯ ಕಪಾಟಿನಲ್ಲಿದ್ದ ರೂ 13,72,000/- ರೂ ಮೌಲ್ಯದ 160.5 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ರೂ 30,000 ನಗದು ಹಣವನ್ನು ಕಳವು ಮಾಡಿದ್ದರು.
ಈ ಬಗ್ಗೆ ವಸಂತಿ ಹೆಗ್ಡೆಯವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಪೋಲೀಸರ ತಂಡ ಮೇ.4 ರಂದು ಸಂಜೆ ಕಳ್ಳತನ ಮಾಡಿದ ಆರೋಪಿಗಳನ್ನು ದಸ್ತಗಿರಿ ಮಾಡಿ ಆರೋಪಿಗಳಿಂದ 106 ಗ್ರಾಂ ತೂಕದ ಚಿನ್ನಾಭರಣವನ್ನು ಸ್ವಾದೀನಪಡಿಸಿಕೊಂಡಿದ್ದಾರೆ.
Follow us on Social media