ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ 8 ಮಂದಿ ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಗಳಾದ ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಸಮ್ಮಿರ್, ಕಲಂದರ್ ಶಾಫಿ, ಆದಿಲ್ ಮೆಹರೂಫ್, ನಾಗರಾಜ್ ಎಂ., ಮೊಹಮ್ಮದ್ ರಿಜ್ವಾನ್ ಮತ್ತು ರಂಜಿತ್ನನ್ನು ಶುಕ್ರವಾರ ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿ ಅನಂತರ ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕಾಗಿ ಮಂಗಳೂರು ಕಾರಾಗೃಹಕ್ಕೆ ಕಳುಹಿಸಲಾಯಿತು.
ಮೇ 1ರಂದು ರಾತ್ರಿ ಸುಹಾಸ್ ಶೆಟ್ಟಿ ತನ್ನ ಗೆಳೆಯರೊಂದಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಆರೋಪಿಗಳು ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಿಪದವು ಜಂಕ್ಷನ್ ಬಳಿ ವಾಹನ ಢಿಕ್ಕಿ ಹೊಡೆಸಿ ಮಾರಕಾಯುಧಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದರು.
ಪ್ರಕರಣದಲ್ಲಿ 8 ಮಂದಿ ನೇರವಾಗಿ ಪಾಲ್ಗೊಂಡಿದ್ದು ಇತರ ಇಬ್ಬರು ಸುಹಾಸ್ನ ಚಲನವಲನದ ಬಗ್ಗೆ ಮಾಹಿತಿ ನೀಡುತ್ತಿದ್ದರು. ಅವರ ಬಂಧನ ಬಾಕಿ ಇದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದರು. ಆ ಪ್ರಕಾರ ಇನ್ನೂ ಇಬ್ಬರು ಆರೋಪಿಗಳ ಬಂಧನವಾಗಬೇಕಿದೆ.
Follow us on Social media