Breaking News

ಮಂಗಳೂರು: ಟಿಂಟ್‌ಡ್‌ ಗ್ಲಾಸ್‌ ಬಳಸಿ ವಾಹನ ಸಂಚಾರ – 504 ಕಾರುಗಳ ವಿರುದ್ದ ಪ್ರಕರಣ ದಾಖಲು

ಮಂಗಳೂರು: ನಗರದ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಬ್ಲಾಕ್‌ ಫಿಲ್ಮ್‌( ಸನ್‌ ಫಿಲ್ಮ್‌) ಅಥವಾ ಟಿಂಟೆಡ್ ಗ್ಲಾಸ್‍ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಪತ್ತೆ ಹಚ್ಚಿ ಕಾರುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಮೇ.2 ರಿಂದ 11 ವರೆಗೆ ಒಟ್ಟು 504 ಕಾರುಗಳ ವಿರುದ್ದ ಪ್ರಕರಣವನ್ನು ದಾಖಲಿಸಿ ರೂ.2,53,000 ದಂಡ ವಿಧಿಸಲಾಗಿದೆ. ಅಲ್ಲದೇ ವಾಹನಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ವಾಹನ ಚಾಲಕರಿಂದ ತೆಗೆಸಿ ಪೊಲೀಸರು ಸೂಕ್ತ ತಿಳುವಳಿಕೆಯನ್ನು ನೀಡಿದರು.

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ವತಿಯಿಂದ ವಿವಿಧ ಕಡೆಗಳಲ್ಲಿ ವಿಶೇಷ ಚೆಕ್‍ಪೋಸ್ಟ್‌ಗಳನ್ನು ತೆರೆದು ವಾಹನಗಳ ತಪಾಸಣೆ ಕಾರ್ಯವನ್ನು ವಾಹನಗಳ ದಾಖಲಾತಿಗಳ ಪರಿಶೀಲನೆಯನ್ನು ನಡೆಸಲಾಯಿತು. ವಿಶೇಷ ಕಾರ್ಯಚರಣೆಯು ಮುಂದಿನ ದಿನಗಳಲ್ಲಿ ಮುಂದುವರೆಯಲಿದೆ ಎಂದು ವರದಿಯಾಗಿದೆ.

Follow us on Social media

About the author