Breaking News

ಬೆಳ್ತಂಗಡಿ: ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ-ಮಗ : ತಾಯಿ ಸಾವು

ಬೆಳ್ತಂಗಡಿ: ನಿದ್ರೆ ಮಾತ್ರೆ ಸೇವಿಸಿ ತಾಯಿ ಮತ್ತು ಮಗ ಆತ್ಮಹತ್ಯೆ ಯತ್ನಿಸಿದ್ದ ಘಟನೆ ಸೋಮವಾರ ನಡೆದಿದ್ದು, ವೃದ್ದೆ ತಾಯಿ ಸಾವಿಗೀಡಾಗಿ ಮಗ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರನ್ನು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ಕಲ್ಯಾಣಿ (96) ಎಂದು ಗುರುತಿಸಲಾಗಿದ್ದು, ಅವರ ಮಗ ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ. (58) ಅವರು ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರಿನ ವೆನ್ಲಾಕ್‌ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಯಾಣಿ ಮತ್ತು ಜಯರಾಂ ಅವರ ಕೂಳೂರಿನ ಮನೆಯಲ್ಲಿ ವಾಸವಿದ್ದು, ಮನೆಯಿಂದ ಯಾರೂ ಹೊರಗೆ ಬಾರದ ಹಿನ್ನಲೆ ಸ್ಥಳೀಯರು ಹೋಗಿ ನೋಡಿದಾಗ ತಾಯಿ ಮತ್ತು ಮಗ ದೇವರ ಕೋಣೆ ಎದುರು ಪ್ರಜ್ಞಾ ಹೀನ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ನಿಗಾ ಘಟಕದಲ್ಲಿದ್ದ ತಾಯಿ ಕಲ್ಯಾಣಿ ಅವರು ಮೇ 12ರಂದು ಸಂಜೆ ಕೊನೆಯುಸಿರೆಳೆದರು. ಮಗ ಜಯರಾಂ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ವಿಷಮಿಸಿದ್ದರಿಂದ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Follow us on Social media

About the author