Breaking News

ಉಡುಪಿ: ವಿದ್ಯುತ್ ತಂತಿ ಮೈಮೇಲೆ ಬಿದ್ದು ಯುವ ಯಕ್ಷಗಾನ ಕಲಾವಿದ ಸಾವು

ಉಡುಪಿ: ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಮರದ ಕೊಂಬೆಯೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ತಗುಲಿ ದ್ವಿಚಕ್ರ ವಾಹನದಲ್ಲಿದ್ದ ಯುವ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಸಾವನ್ನಪ್ಪಿದ ಘಟನೆ ನಡೆದಿದೆ.

ಕೊಪ್ಪ ಸಮೀಪದಲ್ಲಿದ್ದ ಸೂರಾಲು ಮೇಳದ ಪ್ರದರ್ಶನ ಮಳೆಯಿಂದ ರದ್ದಾದ ಕಾರಣ ಮನೆಗೆ ವಾಪಾಸಾಗುತ್ತಿದ್ದ ವೇಳೆ ಆಗುಂಬೆ ಸಮೀಪ ಗಾಳಿ ಮಳೆಗೆ ಮರದ ಕೊಂಬೆ ಮುರಿದು ವಿದ್ಯುತ್ ತಂತಿ ಮೈ ಮೇಲೆ ಬಿದ್ದಿದ್ದು, ರಂಜಿತ್ ಗಂಭೀರ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಸ್ಥಳಿಯರ ಸಹಕಾರದಿಂದ ಹಿಂಬದಿ ಸವಾರ ಸ್ತ್ರೀ ಪಾತ್ರಧಾರಿ ವಿನೋದ್ ರಾಜ್ ಎನ್ನುವವರು ಪಾರಾಗಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳಿಯರ ಸಹಕಾರದಿಂದ ತುರ್ತುವಾಹನದ ಮೂಲಕ ಮಣಿಪಾಲ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

Follow us on Social media

About the author