Breaking News

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ಕಳವಾರು ನಿವಾಸಿ ಅಜರುದ್ದೀನ್ ಯಾನೆ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಯಾನೆ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಯಾನೆ ಚೊಟ್ಟೆ ನೌಷದ್(39) ಬಂಧಿತ ಆರೋಪಿಗಳು.

ಬಂಧಿತ ಆರೋಪಿ ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆಯೇ 3 ಕಳವು ಪ್ರಕರಣ ದಾಖಲಾಗಿತ್ತು. ಈತ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿ ಕೊಲೆಗೆ ಸಹಕರಿಸಿದ್ದ ಎನ್ನಲಾಗಿದೆ.

Follow us on Social media

About the author