ಮಲ್ಪೆ: ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಜತೆಗೆ ಎಲ್ಲ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯವರೆಗೆ ಸ್ಥಗಿತಗೊಳಿಸಲಾಗಿದೆ.
ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಕಾರಣ ದ್ವೀಪಕ್ಕೆ ತೆರಳುವುದು ಅಪಾಯಕಾರಿ ಎಂಬ ಕಾರಣಕ್ಕಾಗಿ ಪ್ರತಿ ವರ್ಷ ಮೇ 15 ರಿಂದ ಸೆ. 15ರ ವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸುತ್ತದೆ. ಮಳೆಗಾಲದಲ್ಲಿ ಪಶ್ಚಿಮ ಕರಾವಳಿಯಲ್ಲಿ ಬೋಟ್ ಚಲಾಯಿಸಲು ಅನುಮತಿ ಇರದು. ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಸ್ಥಗಿತಗೊಳಿಸಲಾಗಿದೆ.
Follow us on Social media