ಉಡುಪಿ: ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕುತ್ಪಾಡಿಯ ಕಾನಂಗಿ ವಾಸುಕಿ ದೇವಸ್ಥಾನದ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ನಶೆಯಲ್ಲಿದ್ದ ಮೊಹಮ್ಮದ್ ಅನಾಸ್ ಮತ್ತು ಫರ್ಹಾನ್ ಅವರನ್ನು ವಶಕ್ಕೆ ತೆಗೆದುಕೊಂಡು ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ಆರೋಪಿಗಳು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media