ಮಂಗಳೂರು: ಜಿಲ್ಲಾ ಕಾರಾಗೃಹ ದಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ನೌಷಾದ್ ಯಾನೇ ಚೊಟ್ಟೆ ನೌಷಾದ್ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ನೌಷಾದ್ ಅಪಾಯದಿಂದ ಪಾರಾಗಿದ್ದಾನೆ.
ಸೋಮವಾರ ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರು ಆತನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲು ಪೊಲೀಸರು ಉದ್ದೇಶಿಸಿದ್ದರು.
ಈ ಮದ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು ಎಂದು ನೌಷಾದ್ ಹೇಳಿದ್ದ. ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಗಾಗಿ ಪೊಲೀಸರು ಕರೆದುಕೊಂಡು ಹೋಗಿದ್ದರು. ಆತನನ್ನು ನೋಡಿದ ಜೈಲಿನಲ್ಲಿದ್ದ ಇತರ ಕೈದಿಗಳು ಇದ್ದಕಿದ್ದಂತೆ ನೌಷಾದ್ ಮೇಲೆ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತು ತೂರಿ ದಾಳಿ ನಡೆಸಿದ್ದಾರೆ.
ನೌಷಾದ್ ನನ್ನು ಮೈಸೂರು ಜೈಲಿಗೆ ಸ್ಥಳಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media