ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿಗೆ ಮತ್ತೆ ಮಹಾ ಮಳೆಯ ಮುನ್ಸೂಚನೆ ಸಿಕ್ಕಿದ್ದು ಇಂದು ನಾಳೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ . ರಾಜ್ಯಕ್ಕೆ ಮೇ 27ಕ್ಕೆ ಮುಂಗಾರು ಪ್ರವೇಶವಾಗಲಿದೆ. ಮುಂಗಾರು ಪ್ರವೇಶಕ್ಕೆ ಮುನ್ನವೇ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುತ್ತಿದೆ.
ಇಂದು, ನಾಳೆ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದ್ದರೆ ಇಂದು, ನಾಳೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಜಾರಿಯಾಗಿದೆ.
ಮೇ 21, 27ರಂದು ಬಾಗಲಕೋಟೆ ಜಿಲ್ಲೆಗೆ ಯೆಲ್ಲೋ ಅಲರ್ಟ್ ಜಾರಿಯಾಗಿದ್ದರೆ ಮೇ 21ರಿಂದ 27ರವರೆಗೆ ಬೆಳಗಾವಿಯಲ್ಲಿ ಮಳೆ ಸುರಿಯಲಿದೆ.
ಮೇ 22, 23ರವರೆಗೆ ಬೀದರ್, ಮೇ 21ರಿಂದ 27ರವರೆಗೆ ಧಾರವಾಡ, ಮೇ 21, 22ರಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ.
ಇಂದು ಚಿತ್ರದುರ್ಗ, ದಾವಣಗೆರೆಗೆ ಆರೆಂಜ್ ಅಲರ್ಟ್, ಮೇ 21, 26, 27ರಂದು ಮೈಸೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಜಾರಿಯಾಗಲಿದೆ.
Follow us on Social media