Breaking News

ಎರುಗುಂಡಿ ಫಾಲ್ಸ್ ಬಳಿ ಏಕಾಏಕಿ ನುಗ್ಗಿದ ನೀರು -ಐವರ ರಕ್ಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಬಳಿಯ ಎರುಗುಂಡಿ ಫಾಲ್ಸ್‌ನಲ್ಲಿ ಅಪಾಯಕ್ಕೆ ಸಿಲುಕಿದ್ದ ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಸ್ಥಳೀಯರ ಮಾತು ಕೇಳದೆ ತುಂಬಿ ಹರಿಯುತ್ತಿರುವ ಫಾಲ್ಸ್‌ನ ಮೇಲೆ ಐವರು ಪ್ರವಾಸಿಗರು ತೆರಳಿದ್ದರು. ಈ ವೇಳೆ ಏಕಾಏಕಿ ನೀರು ನುಗ್ಗಿದೆ. ಇದರಿಂದ ಐವರು ಬಂಡೆಗಳ ನಡುವೆ ಸಿಲುಕಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಲಿದ್ದ ಐವರನ್ನು ಸ್ಥಳೀಯರು ರೋಪ್ ಹಾಕಿ ರಕ್ಷಿಸಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಐವರ ಜೀವ ಉಳಿದಂತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತಿಗೆ ಗ್ರಾಮದಲ್ಲಿ ಎರುಗುಂಡಿ ಫಾಲ್ಸ್ ಇದೆ. ಮುಂಗಾರು ಮಳೆಯ ಅಬ್ಬರಕ್ಕೆ ಫಾಲ್ಸ್ ಮೈದುಂಬಿ ಹರಿಯುತ್ತಿದೆ. ಇನ್ನೂ ರಕ್ಷಣೆಗೊಳಗಾದ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

Follow us on Social media

About the author