Breaking News

ಕರ್ನಾಟಕದಲ್ಲಿ ಕೊರೋನಾಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ 12ಕ್ಕೆ, ಸೋಂಕಿತರ ಸಂಖ್ಯೆ 279ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿಸಿದ್ದು, ಕೊವಿಡ್-19ಗೆ ಬುಧವಾರ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಇಂದು ಬೆಳಗಾವಿ 80 ವರ್ಷದ ವೃದ್ಧೆಯೊಬ್ಬರು ಕೊರೋನಾ ವೈರಸ್ ನಿಂದ ಮೃತಪಟ್ಟಿದ್ದಾರೆ.  ರೋಗಿ- 224 ಸಂಪರ್ಕಕ್ಕೆ ಬಂದಿದ್ದ ಈ ವೃದ್ಧೆಗೆ ಕೊರೋನಾ ಪಾಸಿಟಿವ್ ಬಂದಿತ್ತು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ಮೂಲಕ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾಗೆ ಮೂವರು ಬಲಿಯಾಗಿದ್ದಾರೆ.

ಈ ಮಧ್ಯೆ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಸಂಜೆ ಮತ್ತೆ ಇಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 279ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಬುಧವಾರ ಒಂದೇ ದಿನವೇ ಒಟ್ಟು 19 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇಂದು ಬೆಳಗ್ಗೆ 17 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ ಮತ್ತೆ ಎರಡು ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಒಟ್ಟು 279 ಸೋಂಕಿತರಲ್ಲಿ ಈಗಾಗಲೇ 80 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈಗಾಗಲೇ 12 ಜನರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಅತಿಹೆಚ್ಚು ಕೊರೋನಾ ಸೋಂಕಿತ ಜಿಲ್ಲೆಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಇಂದು ಪತ್ತೆಯಾದ ಹೊಸ ಕೊರೋನಾ ಪ್ರಕರಣಗಳಲ್ಲಿ ಮೈಸೂರು ಮೊದಲ ಸ್ಥಾನದಲ್ಲಿದೆ.

ಇಂದು ಸಂಜೆ ಬೆಳಗಾವಿಯಲ್ಲಿ 1 ಮತ್ತು ವಿಜಯಪುರದಲ್ಲಿ ಒಂದು ಹೊಸ ಪ್ರಕರಣ ಪತ್ತೆಯಾಗಿದೆ. ಬೆಳಗ್ಗೆ ಮೈಸೂರಿನ ಹೊಸದಾಗಿ 10 ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ನಂಜನಗೂಡಿನಲ್ಲೇ  9 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 
ನಂಜನಗೂಡಿನ 41, 30, 27,35,26,35,32 ವರ್ಷದ ವ್ಯಕ್ತಿಗಳಿಗೆ ಸೋಂಕು ತಗಲಿದೆ. ಜೊತೆಗೆ, ಕಲಬುರಗಿಯ ಒಂದು ವರ್ಷದ ಮಗು ಇನ್ ಫ್ಲ್ಯುಯೆನ್ಸಾ ಲೈಕ್ ಇಲ್ ನೆಸ್ ಎಂಬ ರೋಗಕ್ಕೆ ತುತ್ತಾಗಿದೆ. ಬಿಬಿಎಂಪಿ ವ್ಯಾಪ್ತಿಯ 59 ವರ್ಷದ ವೃದ್ಧ, ಬಾಗಲಕೋಟೆಯ 52 ವರ್ಷದ ವ್ಯಕ್ತಿ, ಬಾಗಲಕೋಟೆ ಜಮಖಂಡಿಯ 39 ವರ್ಷದ ವ್ಯಕ್ತಿ, ಮೈಸೂರಿನ 28, 72 ವರ್ಷದ ವ್ಯಕ್ತಿ, ವಿಜಯಪುರದ 38 ವರ್ಷದ ಮಹಿಳೆ ಮತ್ತು 25 ವರ್ಷದ ವ್ಯಕ್ತಿ ಮತ್ತು ಬೆಂಗಳೂರು ನಗರದ 32 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×