Breaking News

ಅಮೆರಿಕಾಗೆ ಕೊರೋನಾಘಾತ: 24 ಗಂಟೆಗಲಲ್ಲಿ 1,891 ಮಂದಿ ಬಲಿ, 732,197 ಜನರಲ್ಲಿ ಸೋಂಕು ಪತ್ತೆ

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಎಂದೇ ಖ್ಯಾತಿ ಹೊಂದಿರುವ ಅಮೆರಿಕಾದಲ್ಲಿ ಮಹಾಮಾರಿ ಕೊರೋನಾ ವೈರಸ್ ಎಡೆಬಿಡದೆ ಕಾಡುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,891 ಮಂದಿ ವೈರಸ್’ಗೆ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಶನಿವಾರ ಒಂದೇ ದಿನ ಅಮೆರಿಕಾದಲ್ಲಿ 38,664 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರಂತೆ ಸೋಂಕಿತರ ಸಂಖ್ಯೆ 732,197ಕ್ಕೆ ಏರಿಕೆಯಾಗಿದೆ. 

ಕಳೆದ ವರ್ಷ ಡಿಸೆಂಬರ್ ನಲ್ಲಿ ಚೀನಾ ದೇಶದ ವುಹಾನ್ ಪ್ರಾಂತ್ಯದಲ್ಲಿ ಕಾಣಿಸಿಕೊಂಡ ಕೊರೋನಾ ಸೋಂಕು ಇಲ್ಲಿಯವರೆಗೆ ಪ್ರಪಂಚದಾದ್ಯಂತ 1.60 ಮಂದಿಯನ್ನು ಬಲಿ ತೆಗೆದುಕೊಂಡಿದೆ. 23 ಲಕ್ಷಕ್ಕಿಂತಲೂ ಹೆಚ್ಚು ಮಂದಿ ಸೋಂಕಿತರು ವಿಶ್ವದಲ್ಲಿದ್ದಾರೆ.

Follow us on Social media

About the author