Breaking News

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ. 13 ರಿಂದ ಪ್ರಾರ್ಥನೆ ಆರಂಭ – ಬಿಷಪ್‌ ಪೀಟರ್‌ ಪಾವ್ಲ್‌ ಸಲ್ಡಾನ್ಹಾ

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚುಗಳಲ್ಲಿ ಪ್ರಾರ್ಥನೆ ಗಳನ್ನು ಆರಂಭಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಅತಿ ವಂ ಡಾ ಪೀಟರ್ ಪಾವ್ಲ್ ಸಲ್ದಾನ್ಹಾ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ಚರ್ಚುಗಳಲ್ಲಿ ಬಲಿಪೂಜೆಗಳನ್ನು ನೆರವೇರಿಸುವ ಕುರಿತಂತೆ ಸರಕಾರ ಈಗಾಗಲೇ ಮಾರ್ಗದರ್ಶನಗಳನ್ನು ನೀಡಿದ್ದು, ಅದರಂತೆ ಬೇಕಾದ ಸಿದ್ದತೆಗಳನ್ನು ಮಾಡಿಕೊಳ್ಳಬೇಕಾಗಿದೆ. ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಥರ್ಮಲ್ ಸ್ಕ್ರೀನರ್, ಸ್ಯಾನಿಟೈಸರ್, ಸ್ವಯಂಸೇವಕರು, ಆಸನ ವ್ಯವಸ್ಥೆ ಇತ್ಯಾದಿ ತಯಾರಿ ಮಾಡಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಆಯಾ ಚರ್ಚುಗಳ ಧರ್ಮಗುರುಗಳಿಗೆ ಸೂಚನೆಗಳನ್ನು ನೀಡಿದ್ದು ಎಲ್ಲಾ ನಿಯಮಗಳನ್ನು ಸಿದ್ದಪಡಿಸಕೊಂಡಿರುವುದು ಖಾತ್ರಿ ಪಡಿಸಿಕೊಂಡು ಜೂನ್ 13ರಿಂದ ಶನಿವಾರ ಮಂಗಳೂರು ಧರ್ಮಪ್ರಾಂತ್ಯದಲ್ಲಿ ಬಲಿಪೂಜೆಗಳನ್ನು ನೆರವೇರಿಸಬಹುದು. ಈ ಕುರಿತು ಹೆಚ್ಚಿನ ಮಾರ್ಗದರ್ಶಿ ಸೂಚನೆಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×