Breaking News

ರಾಜ್ಯದಲ್ಲಿ ಕೊರೋನಾಗೆ ಇಂದು 21 ಬಲಿ, ಬೆಂಗಳೂರಿನಲ್ಲಿ 994 ಸೇರಿ 1694 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 21 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 293ಕ್ಕೇರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಒಟ್ಟು 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 994, ಬಳ್ಳಾರಿ 97, ದಕ್ಷಿಣ ಕನ್ನಡದಲ್ಲಿ 97, ಕಲಬುರಗಿಯಲ್ಲಿ 72 ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 42 ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ 1694 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19710ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಶುಕ್ರವಾರ 471 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 8805ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 10608 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 201 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×