Breaking News

ಮಂಗಳೂರು: ಕುಖ್ಯಾತ ದರೋಡೆಕೋರ ‘ಶಮ್ಮಿ ಕಾಟಿಪಳ್ಳ’ ಬಂಧನ

ಸುರತ್ಕಲ್ : ಎಎಸ್‌ಐಗೆ ರಾಡ್’ನಿಂದ ಮಾರಣಾಂತಿಕ ಹಲ್ಲೆಗೈದಿದ್ದ ಹಾಗೂ ದರೋಡೆ, ಅಪಘಾತ ಹೀಗೆ ಹತ್ತಕ್ಕೂ ಹೆಚ್ಚಿನ ಪ್ರಕರಣದಲ್ಲಿ ಭಾಗಿಯಾಗಿ ತಪ್ಪಿಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ದರೋಡೆಕೋರ ಶಮ್ಮಿ ಯಾನೆ ಶಮೀರ್ ಕಾಟಿಪಳ್ಳ (30)ಯನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.

ಬೆಳ್ಳಿಯಪ್ಪ ನೇತೃತ್ವದ ಪಣಂಬೂರು ರೌಡಿ ನಿಗ್ರಹದಳ ಹಾಗೂ ಪಣಂಬೂರು ಠಾಣೆಯ ಪೊಲೀಸರು ಜಂಟಿಯಾಗಿ ಕಾರ್ಯಾಚರಿಸಿದ್ದು, ಈತನ ಅಡಗುತಾಣದ ಬಗ್ಗೆ ಸುಳಿವು ಪಡೆದು ದಾಳಿ ನಡೆಸಿ ಬಂಧಿಸಲಾಗಿದೆ.

ದರೋಡೆಕೋರ ಶಮ್ಮಿ ಪ್ರಮುಖವಾಗಿ ಪಣಂಬೂರು ಬಂದರು ವ್ಯಾಪ್ತಿಯಲ್ಲಿ ಬರುವ ಲಾರಿ ಚಾಲಕರಿಗೆ ಹಲ್ಲೆಗೈದು ದರೋಡೆ ಮಾಡಿ ಪರಾರಿಯಾಗುತ್ತಿದ್ದ. ಮಾತ್ರವಲ್ಲದೇ ಬೆಂಜನ ಪದವಿನಲ್ಲಿ ದ್ವಿಚಕ್ರ ವಾಹನಕ್ಕೆ ತನ್ನ ವಾಹನ ಢಿಕ್ಕಿ ಹೊಡೆಸಿ ಪರಾರಿಯಾಗಿದ್ದ. ಈತನ ವಿರುದ್ದ ಹಲವಾರು ವಾರೆಂಟ್ ಜಾರಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡು ತಿರುಗಾಡುತ್ತಿದ್ದ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಈ ಕಾರ್ಯಾಚರಣೆ ನಡೆಯಿತು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×