Breaking News

ರಾಜ್ಯದಲ್ಲಿ ಇಂದು ಕೊರೋನಾಗೆ 73 ಬಲಿ, ಬೆಂಗಳೂರಿನಲ್ಲಿ 3,441 ಸೇರಿ 7,542 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಶುಕ್ರವಾರ 7,542 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,51,390ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 73 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,356ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,441 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,00,634ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 24 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 8,580 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,28,588ಕ್ಕೆ ಏರಿಕೆಯಾಗಿದೆ. 1,12,427 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 946 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×