Breaking News

ಮೈಸೂರು: ಮರಕ್ಕೆ ಢಿಕ್ಕಿಯಾದ ಬೊಲೆರೊ ವಾಹನ – ಅಪಘಾತದಲ್ಲಿ 6 ಮಂದಿ ಸಾವು

ಮೈಸೂರು : ಬೊಲೆರೊ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆ ಡಿಕ್ಕಿ ಹೊಡೆದು ಸ್ಥಳದಲ್ಲೇ 6ಮಂದಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹುಣಸೂರಿನಿಂದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಬೊಲೆರೊ ವಾಹನ ಕಲ್ಬೆಟ್ಟದ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಮರಕ್ಕೆ ಡಿಕ್ಕಿಹೊಡೆದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ ಘಟನೆಯಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಗ್ರಾಮದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ, ಬಾಬು ಮೃತಪಟ್ಟರಾಗಿದ್ದಾರೆಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow us on Social media

About the author