Breaking News

ಉಡುಪಿ :  ಅಪಹರಣದ ನಾಟಕವಾಡಿ ಪೋಷಕರಿಗೆ 5 ಲಕ್ಷ ರೂ. ವಂಚನೆ ಯತ್ನ-ಯುವಕನ ಬಂಧನ

ಉಡುಪಿ : ಕುತೂಹಲಕಾರಿ ಘಟನೆಯೊಂದನ್ನು ಜಿಲ್ಲಾ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನಿಗೆ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವರುಣ್ ನಾಯಕ್(25) ನ್ಯಾಯಾಂಗ ಬಂಧನಕ್ಕೆ ಒಳಗಾದ ವ್ಯಕ್ತಿ.

ಪ್ರಕರಣದ ಹಿನ್ನೆಲೆ:
ಜೂನ್ 26ರಂದು ವರುಣ್ ಭಯದ ಧ್ವನಿಯಲ್ಲಿ ತನ್ನ ಪೋಷಕರಿಗೆ ಕರೆ ಮಾಡಿ ತನ್ನನ್ನು ಯಾರೋ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ತಿಳಿಸಿದ್ದ. ಅಪಹರಣಕಾರರು 5 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಎಂದು ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಪೋಷಕರು ಆತಂಕಗೊಂಡು ಉಡುಪಿ ಪೊಲೀಸರಿಗೆ ದೂರು ನೀಡಿದ್ದರು. ಅಪಹರಣ ಕುರಿತಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

  • ಈ ನಡುವೆ ವರುಣ್ ಆಗಾಗ್ಗೆ ತನ್ನ ಪೋಷಕರೊಂದಿಗೆ ವಾಟ್ಸಾಪ್ ಚಾಟ್‌ಗಳ ಮೂಲಕ ಸಂಪರ್ಕದಲ್ಲಿರುತ್ತಿದ್ದ. ಅವನ ತಾಯಿ ಕೊನೆಗೆ ಫೋನ್ ಕರೆಯಲ್ಲಿ ಮಾತನಾಡಲು ಅವನನ್ನು ಒಪ್ಪಿಸಿದರು. ವರುಣ್ ತನ್ನ ಪೋಷಕರಿಗೆ ಕರೆ ಮಾಡಿದಾಗ, ಎಚ್ಚೆತ್ತ ಪೊಲೀಸರು ಫೋನ್ ಕರೆ ಸ್ಥಳವನ್ನು ಟ್ರ್ಯಾಕ್ ಮಾಡಿದ್ದಾರೆ. ಯುವಕನ ಮೊಬೈಲ್ ಲೊಕೇಷನ್ ಪತ್ತೆ ಮಾಡುವಾಗ ಅದು ಗೋವಾದಲ್ಲಿರುವುದು ಗೊತ್ತಾಗಿದೆ ಕೂಡಲೇ ಗೋವಾಕ್ಕೆ ಇಬ್ಬರು ಸಿಬ್ಬಂದಿಗಳನ್ನು ಕಳುಹಿಸಿಕೊಡಲಾಯಿತು, ಈ ವೇಳೆ ಮೊಬೈಲ್ ಲೊಕೇಷನ್ ಪರಿಶೀಸಿ ಆ ಸ್ಥಳಕ್ಕೆ ಹೋದಾಗ ಪೊಲೀಸರಿಗೆ ಶಾಕ್ ಆಗಿತ್ತು, ಆದರೆ ಅಪಹರಣಕ್ಕೊಳಗಾಗಿದ್ದೇನೆ ಎಂದಿದ್ದ ಯುವಕ ತನ್ನ ಗೆಳೆಯರೊಂದಿಗೆ ಗೋವಾದ ಕ್ಯಾಸಿನೋ ಒಂದರಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದ.ಬಳಿಕ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಿಸಿದಾಗ ತಾನು ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ, ಸರಿಯಾದ ಕೆಲಸವಿಲ್ಲದೆ ತನ್ನ ಗೆಳೆಯರೊಂದಿಗೆ ಮೋಜು ಮಸ್ತಿ ಮಾಡಲು ಕೈಯಲ್ಲಿ ಹಣವಿಲ್ಲದಿದ್ದಾಗ ತಲೆಗೆ ಬಂದಿದ್ದು ತನ್ನ ಪೋಷಕರ ಬಳಿ ಇರುವ ಹಣವನ್ನು ಹೇಗಾದರೂ ಮಾಡಿ ಲಪಟಾಯಿಸುವ ಉದ್ದೇಶದಿಂದ ನಾನು ಅಪಹರಣದ ನಾಟಕವಾಡಿ ನನ್ನದೇ ಮೊಬೈಲ್ ನಿಂದ ತಾಯಿಗೆ ಕರೆ ಮಾಡಿ ನನ್ನನ್ನು ಯಾರೋ ಅಪಹರಿಸಿದ್ದಾರೆ ಅವರು ಐದು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ ಅಲ್ಲದೆ ಹಣ ನೀಡದಿದ್ದಲ್ಲಿ ನನ್ನನ್ನು ಕೊಲೆ ಮಾಡುತ್ತಾರೆ ಎಂದು ಅಳುತ್ತಾ ಹೇಳಿದೆ ಎಂದು ತನ್ನ ತಪ್ಪನ್ನು ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ.ಪೋಷಕರ ಹಣ ಎಗರಿಸುವ ಉದ್ದೇಶ ಹಾಗೂ ಪೊಲೀಸರ ಸಮಯವನ್ನು ವ್ಯರ್ಥಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಂಡಿದ್ದು ಯುವಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಯುವಕನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×