Breaking News

ರಾಜ್ಯಸಭೆಗೆ ಡಾ.ಡಿ. ವಿರೇಂದ್ರ ಹೆಗ್ಗಡೆ ಅವರನ್ನು ನಾಮನಿರ್ದೇಶನಗೊಳಿಸಿದ ಕೇಂದ್ರ

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲೀಟ್‌ ಪಿಟಿ ಉಷಾ , ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್‌, ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ನೂತನ ಸದಸ್ಯರಿಗೆ ಅಭಿನಂದನಾ ಟೀಟ್‌ಗಳನ್ನು ಮಾಡಿದ್ದು, ಅವರು ಪ್ರತಿಯೊಬ್ಬ ಭಾರತೀಯರಿಗೆ ಸ್ಫೂರ್ತಿ ಎಂದು ಕರೆದಿದ್ದಾರೆ.

“ಗಮನಾರ್ಹ ಪಿಟಿ ಉಷಾ ಜಿ ಅವರು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಯಲ್ಲಿ ಅವರ ಸಾಧನೆಗಳು ವ್ಯಾಪಕವಾಗಿ ಗುರುತಿಸಿವೆ. ಕಳೆದ ಹಲವಾರು ವರ್ಷಗಳಿಂದ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಕೆಲಸವು ಅಷ್ಟೇ ಶ್ಲಾಘನೀಯವಾಗಿದೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಅವರಿಗೆ ಅಭಿನಂದನೆಗಳು’ ಎಂದು ಮೋದಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಇಳಯರಾಜ ಅವರ ಸೃಜನಶೀಲ ಪ್ರತಿಭೆ ತಲೆಮಾರುಗಳಿಂದಲೂ ಜನರನ್ನು ಆಕರ್ಷಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ. “ಅವರ ಸಂಗೀತಗಳು ಅನೇಕ ಭಾವನೆಗಳನ್ನು ಸುಂದರವಾಗಿ ಪ್ರತಿಬಿಂಬಿಸುತ್ತವೆ. ಅವರ ಜೀವನ ಪಯಣ ಅಷ್ಟೇ ಸ್ಪೂರ್ತಿದಾಯಕವಾಗಿದೆ. ಅವರು ವಿನಮ್ರ ಹಿನ್ನೆಲೆಯಿಂದ ಬೆಳೆದು ತುಂಬಾ ಸಾಧಿಸಿದ್ದಾರೆ. ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಸಂತಸ ತಂದಿದೆ” ಎಂದು ಮೋದಿ ಬರೆದಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×