Breaking News

ಬೆಂಗಳೂರು: ಈಶ್ವರಪ್ಪಗೆ ಕ್ಲೀನ್ ಚಿಟ್ ಸಿಕ್ಕಿರುವುದು ದುರ್ದೈವ-ಕಾಂಗ್ರೆಸ್ ಆಕ್ರೋಶ

ಬೆಂಗಳೂರು : ರಾಜ್ಯದಲ್ಲಿ ಸಂಚಲನವನ್ನುಂಟು ಮಾಡಿದ್ದ ಮಾಜಿ ಸಚಿವ ಈಶ್ವರಪ್ಪ ವಿರುದ್ಧ ೪೦ ಪರ್ಸೆಂಟ್ ಕಮಿಷನ್ ಆರೋಪ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್ ಸಿಕ್ಕಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಇದೊಂದು ದುರ್ದೈವದ ಸಂಗತಿಯಾಗಿದೆ ಎಂದು ಆರೋಪಿಸಲಾಗಿದೆ.

ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಉಲ್ಲೇಖಿಸಿದ್ದಾರೆ.

ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಕರೆದು ವಿಚಾರಣೆಯನ್ನೂ ನಡೆಸಿಲ್ಲ. ಆದರೂ ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಾಧಾರಗಳೇ ಇಲ್ಲ ಎಂದು ತನಿಖೆ ನಡೆಸಿರುವ ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು, ಈಶ್ವರಪ್ಪ ಕೇಸ್ ಕ್ಲೋಸ್ ಮಾಡಿದ್ದಾರೆ. ಇದೊಂದು ದುರ್ದೈವದ ಸಂಗತಿ. ಮಾಜಿ ಸಚಿವರ ವಿರುದ್ಧ ಸಂತೋಷ್ ಪಾಟೀಲ್‌ ನೇರ ಆರೋಪ ಮಾಡಿದ್ದರು. ಸಾವಿಗೆ ಕಾರಣ ಈಶ್ವರಪ್ಪ ಅಂತ ಹೇಳಿದ್ದರು. ಅದರೆ ಬಿ-ರಿಪೋರ್ಟ್ ಹಾಕಿ‌ ಕೇಸ್ ಕ್ಲೋಸ್ ಮಾಡಿದ್ದಾರೆ. ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಾ ಡಿಪಾರ್ಟ್ ಮೆಂಟ್ ಪೇಲ್ಯೂರ್ ಆಗಿದೆ ಎಂದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×