Breaking News

ಬೆಂಗಳೂರು: ಎರಡು ವರ್ಷಗಳ ಬಳಿಕ ಇದೀಗ ಮತ್ತೊಮ್ಮೆ ಪ್ರತ್ಯಕ್ಷನಾದ ಡ್ರೋನ್​ ಪ್ರತಾಪ್

ಬೆಂಗಳೂರು: ನಾನೊಬ್ಬ ಯುವ ವಿಜ್ಞಾನಿ, ನಾನು ಡ್ರೋನ್​ ತಯಾರಿಸಿದ್ದೇನೆ ಎಂದು ಹೇಳಿಕೊಂಡು ವ್ಯಾಪಕ ಸುದ್ದಿಗೆ ಗ್ರಾಸವಾಗಿ ವಿವಾದದ ಬಳಿಕ ನಾಪತ್ತೆಯಾಗಿದ್ದ ಡ್ರೋನ್​ ಪ್ರತಾಪ್ ಇದೀಗ ಮತ್ತೆ ಕಾಣಿಸಿಕೊಂಡಿದ್ದಾರೆ.

ಹೌದು.. ಪೊಲೀಸರ ವಿಚಾರಣೆಯನ್ನೂ ಎದುರಿಸಿ ಕಣ್ಮರೆಯಾಗಿದ್ದ ಡ್ರೋನ್​ ಪ್ರತಾಪ್​, ಎರಡು ವರ್ಷಗಳ ಬಳಿಕ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪ್ರತ್ಯಕ್ಷರಾಗಿರುವ ಪ್ರತಾಪ್​, ಈ ಬಾರಿ ಹೊಸದಾಗಿ ಏನೋ ಪ್ರಾರಂಭಿಸುತ್ತಿರುವಂತೆ ಮುನ್ಸೂಚನೆ ನೀಡಿದ್ದಾರೆ. ಟೇಬಲ್​ ಮೇಲೊಂದು ಲ್ಯಾಪ್​ಲಾಪ್​ ಇಟ್ಟು, ಅದಕ್ಕೆ ಡಾಟಾ ಕೇಬಲ್​ ಅವಳವಡಿಸಿರುವ ಯಾವುದೋ ಒಂದು ಸಾಧನವನ್ನು ತಮ್ಮ ಮುಂದಿಟ್ಟುಕೊಂಡು, ಎರಡು ಕೈಗಳಿಗೆ ಹಳದಿ ಬಣ್ಣದ ರಕ್ಷಾ ಕವಚ ಹಾಗೂ ಕಣ್ಣಿಗೆ ಸುರಕ್ಷಿತ ಕನ್ನಡಕ ಧರಿಸಿ, ಒಂದು ಕೈಯಲ್ಲಿ ಸಾಲ್ಡರಿಂಗ್ ಗೇರ್​ ಹಿಡಿದು ನಗುತ್ತಾ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ. ಟೇಬಲ್​ ಮೇಲೆ ಇನ್ನಿತರ ಎಲೆಕ್ಟ್ರಾನಿಕ್​ ಉಪಕರಣಗಳಿದ್ದು, ಟೇಬಲ್​ನ ಒಂದು ಬದಿಯಲ್ಲಿ ಡ್ರೋನ್​ ಕ್ಯಾಮೆರಾದ ಅರ್ಧ ಚಿತ್ರ ಕಾಣುತ್ತದೆ. ಈ ಬಾರಿ ಡ್ರೋನ್​ ಪ್ರತಾಪ್​ ಯಾವ ಪ್ರಯತ್ನ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ತಿಳಿಸಿಲ್ಲ. ಆದರೆ, ‘ಕೆಟ್ಟ ಜನರು ನಿಮ್ಮ ಜೀವನವನ್ನು ತೊರೆದಾಗ, ಸರಿಯಾದ ವಿಷಯಗಳು ನಿಮ್ಮ ಜೀವನದಲ್ಲಿ ನಡೆಯಲು ಪ್ರಾರಂಭಿಸುತ್ತವೆ’ ಎಂಬ ಅಡಿಬರಹ ನೀಡಿದ್ದಾರೆ. ಸದ್ಯ ಪ್ರತಾಪ್​ ಅವರ ಹೊಸ ಅವತಾರ ವೈರಲ್​ ಆಗಿದ್ದು, ಫೋಟೋ ನೋಡಿದ ನೆಟ್ಟಿಗರು ಪ್ರತಾಪ್​ ಅವರ ಇನ್​ಸ್ಟಾಗ್ರಾಂ ಖಾತೆಯಲ್ಲಿ ಬಗೆಬಗೆಯ ಕಾಮೆಂಟ್​ ಮೂಲಕ ಕಾಲೆಳೆಯುತ್ತಿದ್ದಾರೆ. ಈ ಬಾರಿ ಯಾವ ರಾಕೆಟ್​ ಹಾರಿಸ್ತೀರಾ ಅಣ್ಣಾ ಎಂದು ನೆಟ್ಟಿಗರೊಬ್ಬರು ಕೇಳಿದರೆ, ಇನ್ನೊಬ್ಬ ಅಣ್ಣಾ ಮಿಕ್ಸಿ ರಿಪೇರಿ ಮಾಡುತ್ತಿದ್ದೀರಾ ಎಂದಿದ್ದಾರೆ. ಕಾಗೆ ಪ್ರತಾಪ ಎಂದು ಮಗದೊಬ್ಬ ನೆಟ್ಟಿಗ ವ್ಯಂಗ್ಯವಾಡಿದ್ದಾರೆ. ಅಣ್ಣಾ ನನ್ನ ಇಯರ್​ ಫೋನ್​ನಲ್ಲಿ ಒಂದು ಬದಿ ಕೇಳುತ್ತಿಲ್ಲ, ರಿಪೇರಿ ಮಾಡಿ ಕೊಡು, ಸಾಲ್ಡರಿಂಗ್​ ಮಾಡೋಕೆ ಈ ರೀತಿಯ ಬಿಲ್ಡಪ್​ ಬೇಕಾ?, ಅಣ್ಣನ ಮರು ವಿಶ್ವರೂಪ, ಬ್ರೊ ತುರ್ತಾಗಿ ಶಿವಮೊಗ್ಗದಿಂದ ವಿಜಯಪುರಕ್ಕೆ ಒಂದು ಬ್ಲಡ್​ ಬಾಟಲ್​ ಕಳುಹಿಸಬೇಕಿತ್ತು. 10 ನಿಮಷದಲ್ಲಿ ಕಳುಹಿಸಬೇಕು. ನಿಮ್ಮ ಡ್ರೋಣ್​ ಕಳುಹಿಸಿ, ನಮಗೆ ಸಹಾಯವಾಗುತ್ತೆ ಎಂಬಿತ್ಯಾದಿ ಬಗೆಬಗೆಯ ಕಾಮೆಂಟ್​ಗಳ ಮೂಲಕ ಡ್ರೋನ್​… ಅಲ್ಲ ಅಲ್ಲ ಕಾಗೆ ಪ್ರತಾಪ್​ನನ್ನು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×