Breaking News

ಪುತ್ತೂರು: ಬಿಸಿಯೂಟ ತಯಾರಿ ಸಂದರ್ಭ ಬಿಸಿ ಸಾಂಬಾರು ಬಿದ್ದು ಮಹಿಳೆ ಮೃತ್ಯು

ಪುತ್ತೂರು : ಶಾಲೆಯಲ್ಲಿ ಬಿಸಿಯೂಟ ಮಾಡುತ್ತಿದ್ದ ಸಂದರ್ಭ ಸಾಂಬಾರ್‌ ಪಾತ್ರೆಗೆ ಕಾಲು ಜಾರಿ ಬಿದ್ದು, ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ.

ಪ್ರಮೀಳಾ ಡಿಸೋಜಾ ಅವರು ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು, ಮೇ.30ರಂದು ಮಧ್ಯಾಹ್ನ 12ಗಂಟೆಯ ಸುಮಾರಿಗೆ ಶಾಲೆಯ ಅಡುಗೆ ಕೋಣೆಯಲ್ಲಿ ಸಾಂಬಾರು ಮಾಡುತ್ತಿದ್ದ ಸಂದರ್ಭ ಪಾತ್ರೆಗೆ ಕಾಲು ಜಾರಿ ಬಿದ್ದು, ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow us on Social media

About the author