Breaking News

ಬೆಂಗಳೂರಿನಲ್ಲಿ ಬೋಳಂತೂರು ಯುವಕ ಮೃತ್ಯು

ಬಂಟ್ವಾಳ: ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬೋಳಂತೂರು ಗ್ರಾಮದ ಕಲ್ಪನೆ ನಿವಾಸಿ ಉಮರ್ ಫಾರೂಕ್(35) ಹೃದಯಾಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು. ಹಲವಾರು ವರ್ಷಗಳಿಂದ ಬೆಂಗಳೂರಿನ ಶಿವಾಜಿನಗರದ ಕಮರ್ಶಿಯಲ್ ಸ್ಟ್ರೀಟ್‌ನಲ್ಲಿ ದುಡಿಯುತ್ತಿದ್ದರು. ಸೋಮವಾರ ಮಧ್ಯಾಹ್ನ 2.30ರ ಸುಮಾರಿಗೆ ಸ್ನೇಹಿತನೊಂದಿಗೆ ಮಾತನಾಡಿದ್ದು, ಮಂಗಳವಾರ ಊರಿಗೆ ಬರುವುದಾಗಿ ತಿಳಿಸಿದ್ದರು. ಆದರೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅವರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ.

Follow us on Social media

About the author